ಪಠ್ಯಕ್ರಮದಲ್ಲಿ ಮಕ್ಕಳ ಹಕ್ಕುಗಳ ಅಳವಡಿಕೆಯಾಗಲಿ
ಶಾಲಾ ಮಕ್ಕಳ ಬ್ಯಾಗ್ ತೂಕ ಕಡಿಮೆ ಮಾಡಿ; ಡಾ.ತಿಪ್ಪೇಸ್ವಾಮಿ ಕೆ.ಟಿ. ಶಾಲಾ ಪಠ್ಯಕ್ರಮದಲ್ಲಿ ಮಕ್ಕಳ ಹಕ್ಕುಗಳ ಅಳವಡಿಕೆ ಮಾಡಿಕೊಳ್ಳುವುದರಿಂದ ಮಕ್ಕಳಿಗೆ ಹಾಗೂ ಶಿಕ್ಷಕರಿಗೆ ಮಕ್ಕಳ ಹಕ್ಕುಗಳ ಬಗ್ಗೆ ವ್ಯಾಪಕ ಅರಿವು ಮೂಡಿಸಿದಂತಾಗುತ್ತದೆ ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆಗೆ ನಿರ್ಣಾಯಕ ಕ್ರಮಕೈಗೊಂಡಂತಾಗುತ್ತದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ಕೆ.ಟಿ. ಹೇಳಿದರು. ಅವರು ಬೆಂಗಳೂರಿನಲ್ಲಿ ನಡೆದ ರಾಜ್ಯ ಶಿಕ್ಷಣ ಸಂಶೋಧನೆ ಹಾಗೂ ತರಬೇತಿ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿದರು. ಮಕ್ಕಳ ಹಕ್ಕುಗಳ ಬಗ್ಗೆ ಈಗಾಗಲೇ ಸರ್ಕಾರ ಹಾಗೂ ಸರ್ಕಾರೇತರ ಸಂಸ್ಥೆಗಳು ಸಾಕಷ್ಟು ಅರಿವು ಮೂಡಿಸುತ್ತಿವೆ. ಆದರೆ ಅದು ಪಠ್ಯದ ವಿಷಯವಾದರೆ ಮಕ್ಕಳಿಗೆ ಮತ್ತಷ್ಟು ಪರಿಣಾಮಕಾರಿಯಾಗಿ ತಲುಪುತ್ತದೆ ಎಂದರು. ಸರ್ಕಾರ ಮಕ್ಕಳ ಶಾಲಾ ಬ್ಯಾಗ್ ತೂಕವನ್ನು ಕಡಿಮೆ ಮಾಡಿ ಸುತ್ತೋಲೆ ಹೊರಡಿಸಿದೆ. ಆದಾಗ್ಯೂ ಮಕ್ಕಳು ಕೆ.ಜಿಗಟ್ಟಲೆ ತೂಕದ ಬ್ಯಾಗ್ ಹೊತ್ತು ಬರುತ್ತಿರುವುದು ಆಯೋಗ ಗಮನಿಸಿದೆ. ಇದು ಮಕ್ಕಳ ದೈಹಿಕ ಬೆಳವಣಿಗೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದ್ದು ಈ ಬಗ್ಗೆ ಇಲಾಖೆ ಸುತ್ತೋಲೆ ನೀಡಿದ್ದರೂ ಸೂಕ್ತ ಮೇಲ್ವಿಚಾರಣೆಯ ಕೊರತೆಯಿಂದ ಮಕ್ಕಳು ಸಮಸ್ಯೆ ಎದುರಿಸಬೇಕಾಗಿದೆ. ಅದರಲ್ಲೂ ಪ್ರತೀ ತಿಂಗಳ ಮೂರನೇ ಶನಿವಾರ ಬ್ಯಾಗ್ ಲೆಸ್ ದಿನವನ್ನು ಆಚರಿಸುವ ಮೂಲಕ ಮಕ್ಕಳ ವ್ಯಕ್ತಿತ್ವ ವಿಕಾಸಕ್ಕೆ ...