Posts

Showing posts from December, 2025

ಮಕ್ಕಳ ಅಹವಾಲುಗಳಿಗೆ ತಕ್ಷಣ ಸ್ಪಂದಿಸಿ: ಡಾ.ತಿಪ್ಪೇಸ್ವಾಮಿ

Image
  ವಿಶ್ವಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆಯಲ್ಲಿ ಗುರುತಿಸಿರುವಂತೆ ಮಕ್ಕಳು ಭಾಗವಹಿಸುವ ಹಕ್ಕುನ್ನು ಹೊಂದಿದ್ದಾರೆ. ತಮ್ಮ ಜೀವನದ ಮೇಲೆ ಪರಿಣಾಮ ಬೀರುವ ವಿಷಯಗಳಲ್ಲಿ ಭಾಗವಹಿಸುವ, ತಮ್ಮ ಕುಂದುಕೊರತೆಗಳನ್ನು ಹಂಚಿಕೊಳ್ಳುವ ಹಕ್ಕು ಅವರಿಗಿದೆ. ಹೀಗೆ ಮಕ್ಕಳು ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ವ್ಯಕ್ತಪಡಿಸಲು ಅವಕಾಶ ನೀಡುವುದು ಮತ್ತು ಅವರ ಅಭಿಪ್ರಾಯಗಳನ್ನು ಗಂಭೀರವಾಗಿ ಪರಿಗಣಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ಕೆ.ಟಿ ರವರು ಹೇಳಿದರು. ಅವರು ಸಿರಾ ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಿರಾ ತಾಲ್ಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ  ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿದರು. ಆಡಳಿತ ಮತ್ತು ಪ್ರಜಾಪ್ರಭುತ್ವ ಪ್ರಕ್ರಿಯೆಗಳಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳುವುದು ಅವರಲ್ಲಿ ಜವಾಬ್ದಾರಿ, ವಿಶ್ವಾಸ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳಿಗೆ ಗೌರವದ ಪ್ರಜ್ಞೆಯನ್ನು ಬೆಳೆಸಲು ಸಹಾಯ ಮಾಡುತ್ತದೆ. ಮಕ್ಕಳು ತಮ್ಮ ಭಾವನೆಗಳು ಮತ್ತು ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಪ್ರೋತ್ಸಾಹಿಸಿದಾಗ, ಅವರು ಜವಾಬ್ದಾರಿಯುತ ಹಾಗೂ ಪ್ರಶ್ನೆಮಾಡಬಲ್ಲ ನಾಗರೀಕರಾಗಿ ರೂಪುಗೊಳ್ಳುತಾರೆ ಎಂದರು.   ಸಂವಾದ...