ಟೈಪ್-1 ಮಧುಮೇಹ ಪೀಡಿತ ಮಕ್ಕಳಿಗೆ ಉಚಿತ ಇನ್ಸುಲಿನ್ ನೀಡಿ: ಡಾ.ತಿಪ್ಪೇಸ್ವಾಮಿ ಕೆ.ಟಿ.
ರಾಜ್ಯದ ಟೈಪ್-1 ಮಧುಮೇಹ ಪೀಡಿತ ಮಕ್ಕಳಿಗೆ ಉಚಿತ ಇನ್ಸುಲಿನ್ ಮತ್ತು ಟೆಸ್ಟಿಂಗ್ ಸ್ಟ್ರಿಪ್ಗಳನ್ನು ಒದಗಿಸಲು ಸರ್ಕಾರಕ್ಕೆ ಒತ್ತಾಯ ರಾಜ್ಯದಲ್ಲಿ ಟೈಪ್-1 ಮಧುಮೇಹದಿಂದ (Type-1 Diabetes) ಬಳಲುತ್ತಿರುವ ಸಾವಿರಾರು ಮಕ್ಕಳ ಜೀವನ ರಕ್ಷಣೆಯ ದೃಷ್ಟಿಯಿಂದ ಸರ್ಕಾರವು ತಕ್ಷಣವೇ ಉಚಿತ ಇನ್ಸುಲಿನ್ ಮತ್ತು ಗ್ಲುಕೋಮೀಟರ್ ಟೆಸ್ಟಿಂಗ್ ಸ್ಟ್ರಿಪ್ಗಳನ್ನು ಒದಗಿಸುವ ಯೋಜನೆಯನ್ನು ಜಾರಿಗೆ ತರಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿಕಟಪೂರ್ವ ಸದಸ್ಯ ಡಾ.ತಿಪ್ಪೇಸ್ವಾಮಿ ಕೆ.ಟಿ ಅರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆಯುವ ಮೂಲಕ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಟೈಪ್-1 ಮಧುಮೇಹವು ಮಕ್ಕಳಲ್ಲಿ ಕಂಡುಬರುವ ಒಂದು ಸಂಕೀರ್ಣ ಆರೋಗ್ಯ ಸಮಸ್ಯೆಯಾಗಿದ್ದು, ಬದುಕಲು ಅವರು ಜೀವಮಾನ ಪೂರ್ತಿ ಇನ್ಸುಲಿನ್ ಚುಚ್ಚುಮದ್ದಿನ ಮೇಲೆ ಅವಲಂಬಿತರಾಗಬೇಕಿದೆ. ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಪ್ರತಿ ತಿಂಗಳು ಇನ್ಸುಲಿನ್ ಮತ್ತು ರಕ್ತದ ಸಕ್ಕರೆ ಪರೀಕ್ಷೆಯ ಸ್ಟ್ರಿಪ್ಗಳಿಗಾಗಿ 5000 ದಿಂದ 7000 ರೂಪಾಯಿಗಳವರೆಗೆ ವೆಚ್ಚವಾಗುತ್ತಿದೆ. ಈ ಆರ್ಥಿಕ ಹೊರೆಯನ್ನು ಭರಿಸಲಾಗದೆ ಅನೇಕ ಪೋಷಕರು ಚಿಕಿತ್ಸೆಯನ್ನು ಅರ್ಧಕ್ಕೆ ನಿಲ್ಲಿಸುವ ಅಥವಾ ಅರೆಬರೆ ಚಿಕಿತ್ಸೆ ನೀಡುವ ಸ್ಥಿತಿ ನಿರ್ಮಾಣವಾಗಿದೆ, ಇದು ಮಕ್ಕಳ ಪ್ರಾಣಕ್ಕೆ ಸಂಚಕಾರ ತರುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರವು ರಾಜ್ಯದ ಎಲ್ಲಾ ಸರ್ಕಾರಿ ...
Comments
Post a Comment